Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:6 - ಕನ್ನಡ ಸತ್ಯವೇದವು C.L. Bible (BSI)

6 ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಯೆಹೋವನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ಆ ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:6
23 ತಿಳಿವುಗಳ ಹೋಲಿಕೆ  

ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ದೂರ - ಹತ್ತಿರವಿರುವ ಉತ್ತರ ನಾಡಿನ ಎಲ್ಲ ಅರಸರು, ಲೋಕದ ಸಕಲ ರಾಜ್ಯಗಳು, ಇವರೆಲ್ಲರು ಕುಡಿದ ಮೇಲೆ ಬಾಬಿಲೋನಿನ ಅರಸನು ಕುಡಿಯುವನು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


(ಬೇಡನು)ಹಕ್ಕಿಯ ಗೂಡನ್ನು ಕಂಡುಹಿಡಿಯುವಂತೆ ಜನಾಂಗಗಳ ಆಸ್ತಿಪಾಸ್ತಿಯನ್ನು ಹಿಡಿದುಕೊಂಡಿದ್ದೇನೆ. ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಒಟ್ಟುಗೂಡಿಸಿಟ್ಟುಕೊಳ್ಳುವಂತೆ ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬೆದರಿಸಲು ಯಾರೂ ಇರಲಿಲ್ಲ. ಕೊಕ್ಕು ತೆರೆದು ಕೀಚುಗುಟ್ಟಲು ಯಾರೂ ಕಾಣಲಿಲ್ಲ.”


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಮುರಿದಿಹನು ಸರ್ವೇಶ್ವರ ದುರುಳರಾ ಗದೆಯನು ಮುರಿದಿಹನು ಅರಸರ ರಾಜದಂಡವನು.


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?


ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಮೋವಾಬಿನ ನೆರೆಹೊರೆಯವರೇ, ಅದರ ಹೆಸರುವಾಸಿಯನ್ನು ಅರಿತವರೇ, ನೀವೆಲ್ಲರು ಅದಕ್ಕಾಗಿ ಎದೆಬಡಿದುಕೊಳ್ಳಿ ! ‘ಅಯ್ಯೋ, ಶಕ್ತಿಯುತ ಚೆಂಗೋಲು, ಮಹಿಮೆಯ ದಂಡಕೋಲು ಮುರಿದುಹೋಯಿತಲ್ಲಾ!’ ಎಂದು ಪ್ರಲಾಪಿಸಿರಿ.


ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು