Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:7 - ಕನ್ನಡ ಸತ್ಯವೇದವು C.L. Bible (BSI)

7 ಕಟ್ಟಕಡೆಗೆ ಶಾಂತಿಯಿಂದ ಸುರಕ್ಷಿತವಾಗಿದೆ ಜಗವೆಲ್ಲ ಹರ್ಷಧ್ವನಿಗೈಯುತ ಹಾಡುತಿಹರು ಜನರೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಹರ್ಷಧ್ವನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಈಗ ಇಡೀ ರಾಜ್ಯದಲ್ಲಿ ವಿಶ್ರಾಂತಿ ಇದೆ. ರಾಜ್ಯವು ಸಮಾಧಾನದಿಂದಿದೆ. ಜನರು ಸಂತೋಷದಿಂದ ಇದನ್ನು ಆಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ. ಅವರು ಉಲ್ಲಾಸದ ಧ್ವನಿಯಿಂದ ಹಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:7
13 ತಿಳಿವುಗಳ ಹೋಲಿಕೆ  

ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಆಗ ಭೂಮಿ ಆಕಾಶಗಳೂ ಅಲ್ಲಿನ ಸಮಸ್ತವೂ ಬಾಬಿಲೋನಿನ ನಾಶ ನೋಡಿ ಜಯಘೋಷಮಾಡುವುವು. ಹಾಳುಮಾಡುವರು, ಉತ್ತರದಿಂದ ಬಂದು ಹಾಳುಮಾಡುವರು.


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ I ಸರ್ವೇಶ್ವರನಿಗೆ ಜಯಜಯ ಘೋಷ ಮಾಡಿರಿ II


ಆಗ ಅವರು ವೃಕ್ಷಗಳ ನಡುವೆ ನಿಂತಿದ್ದ ದೇವದೂತನಿಗೆ “ನಾವು ಲೋಕವನ್ನೆಲ್ಲ ವೀಕ್ಷಿಸಿಬಂದಿದ್ದೇವೆ. ಅದು ನಿಶ್ಚಿಂತೆಯಿಂದ ನೆಮ್ಮದಿಯಾಗಿದೆ,” ಎಂದು ವರದಿ ಮಾಡಿದರು.


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ನಿನ್ನನ್ನು ಹಾಳುಮಾಡಿ ಜಗವನ್ನೆಲ್ಲಾ ಸಂತೋಷಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು