Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:2 - ಕನ್ನಡ ಸತ್ಯವೇದವು C.L. Bible (BSI)

2 ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:2
34 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ.


ಯಾಜಕರು ತಲೆ ಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಿಕೊಳ್ಳಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು;


ಯುವತಿಯೇ, ದೀಬೋನ್ ನಗರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಕುಳಿತುಕೊ ಬಾಯಾರಿದವಳಂತೆ. ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದಿದ್ದಾನೆ. ನಿನ್ನ ಕೋಟೆಕೊತ್ತಲುಗಳನ್ನು ಅವನು ಕೆಡವಿದ್ದಾನೆ.


ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.


ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ,


ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.


ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ.


ಗಾಜಾ ಊರು ತಲೆಬೋಳಿಸಿಕೊಂಡಿದೆ ಅಷ್ಕೆಲೋನ್ ಊರು ನಿಶ್ಶಬ್ದವಾಗಿದೆ. ಅನಕಿಮ್ ಬೈಲುನಾಡಿನ ಅವಶೇಷವೇ, ಎಂದಿನವರೆಗೆ ನಿನ್ನನ್ನೇ ಕತ್ತರಿಸಿಕೊಳ್ಳುತ್ತಿರುವೆ !


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.


ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.


ಗೋಣಿತಟ್ಟನುಟ್ಟು ತಿರುಗುತಿಹರು ಹಾದಿಬೀದಿಗಳಲಿ, ಕಣ್ಣೀರಿಡುತ ಸೊರಗಿಹರು ಮಳಿಗೆಗಳಲಿ, ಬೀದಿ ಚೌಕಗಳಲಿ.


ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಕ್ಕಳು. ಆದುದರಿಂದ ಸತ್ತವರಿಗಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು; ನಿಮ್ಮ ಮುಂದಲೆಯನ್ನು ಬೋಳಿಸಿಕೊಳ್ಳಬಾರದು.


ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಊರುಗಳನ್ನು ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.


ಒಬ್ಬ ವ್ಯಕ್ತಿಯ ತಲೆಯ ಕೂದಲು ಉದುರಿಹೋದುದರಿಂದ ಬೋಳುತಲೆಯವನಾದರೂ ಅವನು ಶುದ್ಧನೇ.


ಸೀಹೋನನಾ ಪಟ್ಟಣ, ಆ ಹೆಷ್ಬೋನ್, ಅಲ್ಲಿಂದಲೆ ಹೊರಟು ಬಂದಿತು ಅಗ್ನಿಜ್ವಾಲೆ. ದಹಿಸಿ ಬಿಟ್ಟಿತದು ಮೋವಾಬ್ಯರ ರಾಜಧಾನಿಯಾದ ಆರ್ ನಗರವನ್ನು, ಅರ್ನೋನ್ ಹೊಳೆಯ ಬಳಿಯ ಪೂಜಾಸ್ಥಳಗಳ ದೇವತೆಗಳನ್ನು.


ಆದುದರಿಂದ ಹಾನೂನನು ದಾವೀದನ ಸೇವಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ನಿಲುವಂಗಿಗಳನ್ನು ಕುಂಡಿಯಿಂದ ಕೆಳಗಿನ ಭಾಗವನ್ನೆಲ್ಲಾ ಕತ್ತರಿಸಿ ಕಳುಹಿಸಿಬಿಟ್ಟನು.


ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.


“ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.


“ಮೋವಾಬಿನ ಪೂಜಾಸ್ಥಾನಗಳಲ್ಲಿ ಬಲಿಯರ್ಪಿಸುವುದನ್ನೂ ತಮ್ಮ ದೇವರುಗಳಿಗೆ ಧೂಪಾರತಿಯೆತ್ತುವುದನ್ನೂ ನಿಲ್ಲಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ತಲೆ ಬೋಳಿಸಿಕೊಂಡು, ಗೋಣಿತಟ್ಟನು ಸುತ್ತಿಕೊಂಡು, ದುಃಖಿಸಿ ಗೋಳಾಡುವರು, ಅಳುವರು ನಿನಗಾಗಿ ನಿಟ್ಟುಸಿರಿಟ್ಟು;


“ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅರಚಿಕೊಳ್ಳಿರಿ, ಅಯ್ಯೋ ದುರ್ದಿನವೇ! ಆ ದಿನ ಹತ್ತಿರವಾಯಿತು:


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ಹೆಷ್ಬೋನಿನವರೇ, ಅತ್ತುಗೋಳಾಡಿರಿ. ಆಯಿ ಎಂಬ ಊರು ಹಾಳಾಯಿತು! ರಬ್ಬಾ ನಗರಕ್ಕೆ ಸೇರಿದ ಗ್ರಾಮಗಳವರೇ ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅತ್ತು ಪ್ರಲಾಪಿಸಿರಿ, ಕುರಿಹಟ್ಟಿಗಳಲ್ಲಿ, ಅತ್ತಿತ್ತ ಓಡಾಡಿರಿ. ಏಕೆಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಗೆ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು