Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:5 - ಕನ್ನಡ ಸತ್ಯವೇದವು C.L. Bible (BSI)

5 ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:5
23 ತಿಳಿವುಗಳ ಹೋಲಿಕೆ  

ಅಳುತ್ತಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಿರುವರು ‘ನಾಶವಾದೆವಲ್ಲಾ!’ ಎಂಬ ಪ್ರಾಣಸಂಕಟದ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತಿರುವುದು.


ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಕಳುಹಿಸಿರುವ ದಿನವಿದು - ದಿವ್ಯದರ್ಶನದ ಕಣಿವೆಯ ದಿನ, ಗಲಿಬಿಲಿಯ ದಿನ, ತುಳಿದಾಟದ ದಿನ, ಭಯಭ್ರಾಂತಿಯ ದಿನ, ಕೋಟೆಕೊತ್ತಲಗಳನ್ನು ಹೊಡೆದುರುಳಿಸುವ ದಿನ. ಕೂಗಾಟವು ಬೆಟ್ಟದಲ್ಲಿ ಮಾರ್ದನಿಸುವ ದಿನ !


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಇವರೆಲ್ಲರೂ ಬಹಳವಾಗಿ ನಡೆಯುವಾಗ ಸುತ್ತ-ಮುತ್ತಿನವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.


ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.


ಈಗ ಲವಣ ಸಮುದ್ರ ಎನಿಸಿಕೊಳ್ಳುವ ಸಿದ್ದೀಮ್ ತಗ್ಗುಪ್ರದೇಶದಲ್ಲಿ ಒಂದುಗೂಡಿದ್ದ ಸೊದೋಮಿನ ಅರಸ ಬೆರಗ, ಗೊಮೋರದ ಅರಸ ಬಿರ್ಶಗ, ಅದ್ಮಾಹದ ಅರಸ ಶಿನಾಬ, ಚೆಬೋಯಿಮನ ಅರಸ ಶೆಮೇಬರ, ಬೆಲಗಿನ (ಅಂದರೆ ಚೋಗರದ) ಅರಸ - ಈ ಐವರೊಡನೆ ಯುದ್ಧಮಾಡಿದರು.


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ.


ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


‘ಅಯ್ಯೋ, ಸೂರೆಹೋದೆವು, ತೀವ್ರ ನಾಶವಾದೆವು!’ ಎಂಬ ಕೂಗಾಟ ಕೇಳಿಬರುತ್ತಿದೆ ಹೊರೊನಯಿಮಿನಿಂದ.


ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು