Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:6 - ಕನ್ನಡ ಸತ್ಯವೇದವು C.L. Bible (BSI)

6 ಬತ್ತಿಹೋಯಿತು ನಿಮ್ರೀಮ್ ನದಿಯು, ಬಾಡಿಹೋಯಿತು ಹಸಿಹುಲ್ಲು, ಮುಗಿಯಿತು ಮೇವು, ಇಲ್ಲವಾಯಿತು ಪಚ್ಚೆಪಸಿರಾವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸುರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ರೀಮ್ ಹೊಳೆಯು ಬತ್ತಿಹೋಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು ಅಲ್ಲಿ ಹಸಿರಾದದ್ದು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:6
11 ತಿಳಿವುಗಳ ಹೋಲಿಕೆ  

ಬೇತ್ ಹಾರನ್ ಎಂಬ ಸುತ್ತು ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ಆಡುಕುರಿಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು.


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.


ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.


ಹೆಷ್ಬೋನಿನ ಮತ್ತು ಎಲೆಯಾಲೆಯ ಜನರು ಅರಚಿಕೊಳ್ಳುತ್ತಿದ್ದಾರೆ. ಆ ಕೂಗು ಯಹಚಿನವರೆಗೆ ಕೇಳಿಸುತ್ತಿದೆ. ಚೋಯರಿನಿಂದ ಹೊರೊನಯಿಮಿನವರೆಗೆ ಮತ್ತು ಎಗ್ಲತ್ ಶೆಲೆಶೀಯದವರೆಗೆ ಆ ಕಿರಿಚಾಟ ಕೇಳಿಸುತ್ತಿದೆ. ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಕಾಡಿನಲ್ಲಿ ಹುಲ್ಲಿಲ್ಲದ ಕಾರಣ ತಾಯಿಹುಲ್ಲೆ ಮರಿಹಾಕಿ ಮರೆಯಾಗುತ್ತದೆ.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು