ಯೆಶಾಯ 15:8 - ಕನ್ನಡ ಸತ್ಯವೇದವು C.L. Bible (BSI)8 ಹಬ್ಬಿದೆ ಅದರ ಪ್ರಲಾಪ ಮೋವಾಬಿನ ಎಲ್ಲೆಗಳ ಪರಿಯಂತ, ವ್ಯಾಪಿಸಿದೆ ಅದರ ಆಕ್ರಂದ ಎಗ್ಲಯಿಮಿನ್, ಬೆಯೆರ್ ಏಲೀಮಿನ ತನಕ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿವಿುನವರೆಗೂ ಬೆಯೇರ್ ಏಲೀವಿುನ ಪರ್ಯಂತವೂ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ. ಅದರ ಕಿರಿಚಾಟ ಎಗ್ಲಯಿಮ್ ಹಾಗೂ ಬೆಯೆರ್ ಏಲೀಮ್ ಊರುಗಳ ತನಕ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿ |