Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:7 - ಕನ್ನಡ ಸತ್ಯವೇದವು C.L. Bible (BSI)

7 ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. ನೀವು ಕೀರ್ ಹರೆಷೆಥಿನ ಜನರ ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದಕಾರಣ ಮೋವಾಬಿನ ನಿವಿುತ್ತ ಮೋವಾಬೇ ಗೋಳಾಡುವದು; ಪ್ರತಿಯೊಬ್ಬನೂ ಪ್ರಲಾಪಿಸುವನು; ಮುರಿದು ಹೋದವರಾಗಿ ನೀವು ಕೀರ್ ಹರೆಷೆಥಿನ ದೀಪದ್ರಾಕ್ಷೆಯು ಹಾಳಾಯಿತಲ್ಲಾ ಎಂದು ನರಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಮೋವಾಬಿನ ನಿಮಿತ್ತ ಮೋವಾಬ್ಯರು ಗೋಳಾಡುವರು, ಒಟ್ಟಾಗಿ ಗೋಳಾಡುವರು. ಏಕೆಂದರೆ ಕೀರ್ ಹರೆಷೆಥಿನ ದ್ರಾಕ್ಷಿಯ ಕಡುಬುಗಳಿಗೋಸ್ಕರ ನೀವು ದುಃಖಿಸುವಿರಿ. ನಿಜವಾಗಿಯೂ ಅವರು ನೊಂದು ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:7
8 ತಿಳಿವುಗಳ ಹೋಲಿಕೆ  

ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.


ಮೋವಾಬು ನಾಶವಾಗಿದೆ, ಅವಮಾನಕ್ಕೆ ಈಡಾಗಿದೆ. ಗೋಳಾಡಿರಿ, ಅತ್ತು ಪ್ರಲಾಪಿಸಿರಿ ! ಮೋವಾಬು ಹಾಳಾಯಿತೆಂದು ಅರ್ವೋನಿನ ತೀರದಲ್ಲೆಲ್ಲಾ ಘೋಷಿಸಿರಿ.


ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಇಸ್ರಯೇಲಿನ ಪ್ರತಿ ಒಬ್ಬ ಪುರುಷನಿಗೂ ಸ್ತ್ರೀಗೂ ಒಂದೊಂದು ರೊಟ್ಟಿಯನ್ನೂ ಬೇಯಿಸಿದ ಒಂದು ತುಂಡುಮಾಂಸವನ್ನೂ ಒಣಗಿದ ದ್ರಾಕ್ಷೆಗಳನ್ನೂ ಹಂಚಿದನು


ದೂರದ ಉತ್ತರದಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಗೋತ್ರಗಳ ಜನರು ತಮ್ಮ ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ರೊಟ್ಟಿ, ಅಂಜೂರ, ಒಣದ್ರಾಕ್ಷಿ, ದ್ರಾಕ್ಷಾರಸ, ಎಣ್ಣೆಗಳನ್ನು ಹೊತ್ತುತಂದರು. ಭೋಜನಕ್ಕೆ ಕುರಿದನಗಳನ್ನು ಸಹ ತೆಗೆದುಕೊಂಡು ಬಂದರು. ನಾಡಿನಲ್ಲೆಲ್ಲಾ ಸಂತೋಷ ಸಂಭ್ರಮವಿತ್ತು.


ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು