Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:9 - ಕನ್ನಡ ಸತ್ಯವೇದವು C.L. Bible (BSI)

9 ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿವಿುತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ, ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು; ನಿಮ್ಮ ಹಣ್ಣಿನ ಮೇಲೆಯೂ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದಕಾರಣ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರ್ ಪಟ್ಟಣದೊಂದಿಗೆ ಅಳುವೆನು. ಓ ಹೆಷ್ಬೋನ್ ಮತ್ತು ಎಲೆಯಾಲೆ ಪಟ್ಟಣಗಳೇ, ನಿಮ್ಮನ್ನು ನನ್ನ ಕಣ್ಣೀರಿನಿಂದ ತೋಯಿಸುವೆನು! ಏಕೆಂದರೆ ಶತ್ರುಗಳು ಬಿದ್ದುಹೋದ ನಿಮ್ಮ ಬೇಸಿಗೆಯ ಫಲಗಳಿಗೂ, ಬೆಳೆಗಳಿಗೂ ಆರ್ಭಟಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:9
8 ತಿಳಿವುಗಳ ಹೋಲಿಕೆ  

ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು.


ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.


ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.


ಆ ಊರಿನವರು ಒಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಆಲೆಗಳಲ್ಲಿ ರಸ ತೆಗೆದು, ತಮ್ಮ ದೇವರ ಗುಡಿಗೆ ಹೋಗಿ, ಹಬ್ಬಮಾಡಿ, ಉಂಡು, ಕುಡಿದು ಅಬೀಮೆಲೆಕನನ್ನು ಶಪಿಸಿದರು.


ತಲೆ ಬೋಳಿಸಿಕೊಂಡು, ಗೋಣಿತಟ್ಟನು ಸುತ್ತಿಕೊಂಡು, ದುಃಖಿಸಿ ಗೋಳಾಡುವರು, ಅಳುವರು ನಿನಗಾಗಿ ನಿಟ್ಟುಸಿರಿಟ್ಟು;


“ನರಪುತ್ರನೇ, ನೀನು ಈಜಿಪ್ಟಿನ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು