Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:13 - ಕನ್ನಡ ಸತ್ಯವೇದವು C.L. Bible (BSI)

13 ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:13
33 ತಿಳಿವುಗಳ ಹೋಲಿಕೆ  

ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II


ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II


ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.


ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ಬಿರುಗಾಳಿಗೆ ತರಗೆಲೆಯಂತೆ ತೂರಿಹೋಗಲಿ I ಪ್ರಭುವಿನ ದೂತನವರನು ಬೆನ್ನಟ್ಟಿ ಹೋಗಲಿ II


‘ಇಲ್ಲಿಯತನಕ ಬರಬಹುದು, ಇದನು ಮೀರಿ ಬರಕೂಡದು’ ‘ಮೊರೆವ ನಿನ್ನ ತೆರೆಗೆ ಇಲ್ಲಿಗೇ ತಡೆ’ ಎಂದು ವಿಧಿಸಿದವನು ನಾನು.


ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II


ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.


ಅವರೆಲ್ಲರು ಖಡ್ಗದಿಂದ, ಹಿರಿದ ಕತ್ತಿಯಿಂದ, ಹೂಡಿದ ಬಿಲ್ಲಿನಿಂದ, ಯುದ್ಧದ ಬಾಧೆಯಿಂದ ತಪ್ಪಿಸಿಕೊಂಡು ಓಡಿಬಂದಿರುವರು.”


ಚೆಂಡಿನಂತೆ ಉಂಡೆ ಮಾಡಿ ನಿನ್ನನ್ನು ಗಿರ್ರನೆ ಸುತ್ತಿಸಿ ವಿಸ್ತಾರವಾದ ಬಯಲಿಗೆ ಬಿಸಾಡುವರು. ದಣಿಯ ಮನೆಗೆ ಅಪಮಾನ ತಂದವನೇ, ನೀನು ಸಾಯುವುದು ಅಲ್ಲೇ.


ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.


ಆತನ ಗಣನೆಗೆ ರಾಷ್ಟ್ರಗಳು ಕಪಿಲೆಯಿಂದ ಉದುರುವ ತುಂತುರುಗಳು ತ್ರಾಸಿನ ತಟ್ಟೆಯ ಮೇಲಿರುವ ಧೂಳಿನ ಕಣಗಳು ದ್ವೀಪಗಳೋ ಆತನ ತೂಕಕ್ಕೆ ಅಣುರೇಣುಗಳು.


ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರುವಾಗಲೆ ಬಾಡುವುದು ಇವರ ಸಂತಾನ ಆತನ ಶ್ವಾಸದಿಂದಲೆ; ಬಡಿದು ಹೊಯ್ಯಲ್ಪಡುವುದು ಒಣಹುಲ್ಲಿನಂತೆ ಬಿರುಗಾಳಿಯಿಂದಲೆ.


ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.


ಕಾಲವು ಹೊಟ್ಟಿನಂತೆ ಹಾರಿಹೋಗುವ ಮೊದಲು, ಸರ್ವೇಶ್ವರಸ್ವಾಮಿಯ ಉಗ್ರಕೋಪವು ನಿಮ್ಮ ಮೇಲೆ ಎರಗುವ ಮುಂಚೆ, ಅವರ ಸಿಟ್ಟಿನ ದಿನ ನಿಮ್ಮನ್ನು ಮುಟ್ಟುವುದಕ್ಕೆ ಮುನ್ನ ಸೇರ ಬನ್ನಿ, ಕೂಡಿ ಬನ್ನಿ.


ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II


ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು