Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:3 - ಕನ್ನಡ ಸತ್ಯವೇದವು C.L. Bible (BSI)

3 ಎಫ್ರಯಿಮಿಗೆ ಕೋಟೆಕೊತ್ತಲಗಳು, ದಮಸ್ಕಸ್ಸಿಗೆ ರಾಜ್ಯಾಡಳಿತವು ಇಲ್ಲದಂತಾಗುವುವು. ಸಿರಿಯದಲ್ಲಿ ಅಳಿದುಳಿದವರು ಅಪಮಾನಕ್ಕೀಡಾಗುವರು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಫ್ರಾಯೀವಿುಗೆ ರಕ್ಷಣೆಯಾಗಿರುವ ಕೋಟೆಯೂ ದಮಸ್ಕವು ನಡಿಸುವ ರಾಜ್ಯಾಧಿಕಾರವೂ ಇಲ್ಲವಾಗುವವು; ಅರಾಮ್ಯರಲ್ಲಿ ಉಳಿದವರಿಗೆ ಇಸ್ರಾಯೇಲ್ಯರ ಮಹಿಮೆಯ ಗತಿಯಾಗುವದು ಎಂಬದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:3
27 ತಿಳಿವುಗಳ ಹೋಲಿಕೆ  

ಎಫ್ರಯಿಮರ ಮಹಿಮೆ ಪಕ್ಷಿಯಂತೆ ಹಾರಿಹೋಗುವುದು. ಅಲ್ಲಿ ಯಾರೂ ಮಕ್ಕಳನ್ನು ಹೆರುವುದಿಲ್ಲ; ಯಾರೂ ಗರ್ಭಿಣಿಯಾಗುವುದಿಲ್ಲ; ಯಾರೂ ಗರ್ಭ ಧರಿಸುವುದಿಲ್ಲ.


ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.


ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು.


ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.


ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”


ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.


ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಗೋಮೆರಳು ಪುನಃ ಗರ್ಭಿಣಿಯಾಗಿ ಒಂದು ಹೆಣ್ಣುಮಗುವನ್ನು ಹೆತ್ತಳು. ಆಗ ಸರ್ವೇಶ್ವರ, ಹೊಶೇಯನಿಗೆ: “ಇವಳನ್ನು ‘ಲೋರುಹಾಮ’ ಎಂದು ಕರೆ. ಏಕೆಂದರೆ, ನಾನು ಇನ್ನು ಇಸ್ರಯೇಲರನ್ನು ಪ್ರೀತಿಸೆನು; ಇನ್ನು ಅವರನ್ನು ಕ್ಷಮಿಸೆನು.


ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


“ಆ ದಿನದಂದು ಇಸ್ರಯೇಲಿನ ಕೊಬ್ಬು ಕರಗುವುದು. ಅದರ ಮಹಿಮೆ ಕ್ಷಯಿಸಿಹೋಗುವುದು.


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು