Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:6 - ಕನ್ನಡ ಸತ್ಯವೇದವು C.L. Bible (BSI)

6 ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಎಣ್ಣೆಯ ಮರವನ್ನು ಬಡಿದ ಬಳಿಕ ಮೇಲಿನ ಕೊಂಬೆಯ ಕೊಟ್ಟಕೊನೆಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ರೆಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು, ನಿಂತಿರುವಂತೆ ಹಕ್ಕಲು ಅದರಲ್ಲಿ ಉಳಿದಿರುವದು ಎಂದು ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವುದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವುದು” ಇದು ಸರ್ವಶಕ್ತನಾದ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:6
16 ತಿಳಿವುಗಳ ಹೋಲಿಕೆ  

ಉಳಿಯುವುವು ಜನಾಂಗಗಳು ಜಗದ ಮಧ್ಯೆ, ಎಣ್ಣೆಯ ಬೀಜವನು ಉದುರಿಸಿದ ಮೇಲೆ ಮಿಗುವ ಹೀಚಿನಂತೆ, ದ್ರಾಕ್ಷಿ ಹಣ್ಣನು ಕೊಯ್ದ ಮೇಲೆ ಉಳಿದ ಕೂಳೆಯಂತೆ.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ?


ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸರಿಸಮಾನ ಆದದ್ದನ್ನು ನಾನೇನು ಮಾಡಿದೆ? ಅಭೀಯಿಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಯಿಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.


ಸರ್ವೇಶ್ವರ ಸ್ವಾಮಿ ಹೀಗೆಂದಿದ್ದಾರೆ : ನಾಡೆಲ್ಲ ಬಟ್ಟಬರಿದಾಗುವುದು; ಆದರೆ ನಾನು ಅದನ್ನು ಸಂಪೂರ್ಣವಾಗಿ ಲಯಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು