Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:1 - ಕನ್ನಡ ಸತ್ಯವೇದವು C.L. Bible (BSI)

1 ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳು ಪಟಪಟನೆ ಆಡುವ ನಾಡು, ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದೀಮಾರ್ಗವಾಗಿ ಕಳುಹಿಸುವ ದೇಶ, ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೂಷ್ ನದಿಯ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:1
18 ತಿಳಿವುಗಳ ಹೋಲಿಕೆ  

ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.


ಅಷ್ಟರಲ್ಲಿ ಸುಡಾನಿನ ರಾಜ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸನಾದ ಹಿಜ್ಕೀಯನಿಗೆ,


ಸುಡಾನಿನ ಜನರೇ, ನೀವೂ ಸಹ ಕತ್ತಿಗೆ ತುತ್ತಾಗುವಿರಿ.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


“ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ನನಗೆ ನೀನು ನಿರಂತರದ ಸಹಾಯಕ I ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ II


ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ಅಷ್ಟರಲ್ಲೆ ಸುಡಾನಿನ ಅರಸ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸ ಹಿಜ್ಕೀಯನಿಗೆ,


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು