Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:2 - ಕನ್ನಡ ಸತ್ಯವೇದವು C.L. Bible (BSI)

2 ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವೇಗವುಳ್ಳ ದೂತರೇ, ಉನ್ನತವಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದು ಆಪಿನ ದೋಣಿಗಳಲ್ಲಿ ಸಮುದ್ರ ಮಾರ್ಗದಿಂದ ರಾಯಭಾರಿಗಳನ್ನು ನೀರಿನ ಮೇಲೆ ಕಳುಹಿಸುತ್ತದೆ. ಶೀಘ್ರವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನುಣುಪಾದ ಚರ್ಮವುಳ್ಳ ಜನರ ಬಳಿಗೂ, ಸರ್ವರಿಗೂ ಭಯಪ್ರಧರಾಗಿರುವ ಜನರ ಬಳಿಗೂ, ವಿಚಿತ್ರ ಭಾಷೆಯಿರುವ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ರಾಷ್ಟ್ರದವರ ಬಳಿಗೂ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:2
14 ತಿಳಿವುಗಳ ಹೋಲಿಕೆ  

ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು.


ಸುದಾನ್ ಹಾಗೂ ಲಿಬಿಯರ ಸೈನ್ಯ ಅಪರಿಮಿತ ರಥಾಶ್ವಬಲಗಳುಳ್ಳ ಮಹಾ ಸೈನ್ಯವಲ್ಲವೇ? ನೀವು ಸರ್ವೇಶ್ವರನನ್ನು ಆಶ್ರಯಿಸಿಕೊಂಡದ್ದರಿಂದ ಅವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು.


ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


“ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”


ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.


ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.


ಬೆಂಡಿನ ಹರಗಲು ದೌಡಾಯಿಸುವಂತೆ ಬೇಟೆಯ ಮೇಲೆ ಗರುಡವೆರಗುವಂತೆ ಕಳೆದುಹೋಗುತ್ತವೆ ಶೀಘ್ರಗತಿಯಲ್ಲೆ.


“ಎದೋಮೇ, ಸರ್ವೇಶ್ವರನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ. ‘ನೀವು ಒಟ್ಟಿಗೆ ಸೇರಿ ಯುದ್ಧಕ್ಕೆ ಹೊರಟು, ಎದೋಮಿನ ಮೇಲೆ ದಾಳಿಮಾಡಿರಿ’ ಎಂದು ಸೇವಕನ ಮೂಲಕ ರಾಷ್ಟ್ರಗಳಿಗೆ ಹೀಗೆ ಹೇಳಿಕಳುಹಿಸಿದ್ದಾರೆ.


ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.


ಅವರು ಕ್ರೂರಿಗಳು, ಭಯಂಕರರು. ತಮ್ಮದೇ ಆದ ನ್ಯಾಯನೀತಿಯನ್ನು ರೂಪಿಸಿಕೊಳ್ಳುವಂಥವರು; ತಮ್ಮನ್ನು ತಾವೇ ಗೌರವಿಸಿಕೊಳ್ಳುವ ಅಹಂಭಾವಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು