Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:3 - ಕನ್ನಡ ಸತ್ಯವೇದವು C.L. Bible (BSI)

3 ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ : ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನೆತ್ತುವಾಗ ನೋಡಿರಿ, ತುತೂರಿಯನ್ನೂದುವಾಗ ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:3
20 ತಿಳಿವುಗಳ ಹೋಲಿಕೆ  

ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


“ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ.


ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.


ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ನಾಡೇ, ನಾಡೇ, ಎಲೈ ನಾಡೇ, ಸರ್ವೇಶ್ವರನ ಮಾತಿಗೆ ಕಿವಿಗೊಡು.


ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.


ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.


ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ಇಂತೆನ್ನುವರು ಸ್ವಾಮಿ ಸರ್ವೇಶ್ವರ : ಇದೋ, ಕೈಸನ್ನೆಮಾಡುವೆ ಜನಾಂಗಗಳಿಗೆ ನನ್ನ ಧ್ವಜವನ್ನೆತ್ತುವೆ ದೇಶಾಂತರಗಳವರೆಗೆ ಬರುವರವರು ನಿನ್ನ ಕುವರರನು ಅಪ್ಪಿಕೊಂಡು ಎದೆಗೆ ಕರೆತರುವರು ನಿನ್ನ ಕುವರಿಯರನು ಹೆಗಲಮೇಲೆ.


“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು