Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ನನಗೆ ಹೇಳಿರುವದೇನಂದರೆ, ಬಿಸಿಲಿನಲ್ಲಿ ಜಳಜಳಿಸುವ ದಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ನನಗೆ ಹೀಗೆ ಹೇಳಿದರು, “ನಾನು ನನ್ನ ವಿಶ್ರಾಂತಿಯನ್ನು ತೆಗೆದುಕೊಳ್ಳುವೆನು. ಬಿಸಿಹಗಲಿನ ಸೂರ್ಯನಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದಂತೆಯೂ ನಾನು ನನ್ನ ನಿವಾಸಸ್ಥಾನದಲ್ಲಿ ಸುಮ್ಮನೆ ನೋಡುತ್ತಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:4
17 ತಿಳಿವುಗಳ ಹೋಲಿಕೆ  

“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸುವಾಗ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು