ಯೆಶಾಯ 19:1 - ಕನ್ನಡ ಸತ್ಯವೇದವು C.L. Bible (BSI)1 ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು. ಅಧ್ಯಾಯವನ್ನು ನೋಡಿ |