ಯೆಶಾಯ 19:11 - ಕನ್ನಡ ಸತ್ಯವೇದವು C.L. Bible (BSI)11 “ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವೃದ್ಧರ ಆಲೋಚನೆಯೂ ಹುಚ್ಚಾಟ; ನೀವು ಫರೋಹನಿಗೆ - ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜವಂಶೀಯನು ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ? ನಿನ್ನ ಜ್ಞಾನಿಗಳು ಎಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಚೋವನ್ ಪಟ್ಟಣದ ಅಧಿಪತಿಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿದೆ. ನೀವು ಫರೋಹನನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ಶಿಷ್ಯನೆಂದು ಹೇಳುವುದು ಹೇಗೆ”? ಅಧ್ಯಾಯವನ್ನು ನೋಡಿ |