Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅದರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಿಸಿದ್ದಾನೆ; ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಅವರ ಮಧ್ಯದಲ್ಲಿ ತತ್ತರಿಸುವ ಆತ್ಮವನ್ನು ಸುರಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಈಜಿಪ್ಟ್ ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:14
20 ತಿಳಿವುಗಳ ಹೋಲಿಕೆ  

ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು.


ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’


ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


“ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.


ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.


ಸರ್ವೇಶ್ವರಸ್ವಾಮಿ ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ದುಷ್ಟ ಆತ್ಮವನ್ನು ಕಳುಹಿಸಿದರು. ಈ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹ ಎಸಗಿದರು.


ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನೇ ಕಳುಹಿಸಿದ್ದಾರೆ,” ಎಂದು ಹೇಳಿದನು.


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.


ಈ ಜನರನ್ನು ನಡೆಸುವವರು ತಪ್ಪುದಾರಿಗೆ ಎಳೆಯುವಂಥವರು. ಅವರನ್ನು ಹಿಂಬಾಲಿಸುವವರೆಲ್ಲ ನಾಶವಾಗುವರು.


ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು