Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:16 - ಕನ್ನಡ ಸತ್ಯವೇದವು C.L. Bible (BSI)

16 ಆ ದಿನದಂದು ಈಜಿಪ್ಟಿನವರು ಹೆಂಗಸರಂತೆ ಅಂಜುಬುರುಕರಾಗುವರು; ಸೇನಾಧೀಶ್ವರ ಸರ್ವೇಶ್ವರ ತಮ್ಮನ್ನು ದಂಡಿಸಲು ಕೈಯೆತ್ತುವಾಗ ಅವರು ಭಯಪಟ್ಟು ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ದಿನದಲ್ಲಿ ಐಗುಪ್ತವು ಹೆಣ್ಣಾಗಿ ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಕೈಬೀಸುವದರಿಂದ ಭಯಪಟ್ಟು ನಡುಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಸಮಯದಲ್ಲಿ ಈಜಿಪ್ಟಿನವರು ಭಯದಿಂದ ಕಂಗೆಟ್ಟ ಹೆಂಗಸರಂತಿರುವರು. ಅವರು ಸರ್ವಶಕ್ತನಾದವನಿಗೆ ಭಯಪಡುವರು. ಯೆಹೋವನು ಜನರನ್ನು ಶಿಕ್ಷಿಸಲು ತನ್ನ ಕೈಯನ್ನೆತ್ತುವನು. ಆಗ ಅವರೆಲ್ಲರೂ ಹೆದರಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:16
18 ತಿಳಿವುಗಳ ಹೋಲಿಕೆ  

ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು.


ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.


ಹೊಡೆಯಲಿ ಅಶ್ವಗಳನ್ನೂ ರಥಗಳನ್ನೂ ಬಾಬಿಲೋನಿನಲ್ಲಿರುವ ನಾನಾ ವಿದೇಶಿಯರನ್ನೂ ಬೆದರಿಸಲಿ ಅವರ ಹೆಂಗಸರನ್ನು, ಕಬಳಿಸಲಿ, ಸೂರೆಮಾಡಲಿ ಆ ಖಡ್ಗ ಅವರ ಸಂಪತ್ತನ್ನು.


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”


ಅದೇ ದಿನ ಬೀಡುಬಿಡುವರು ಶತ್ರುಗಳು ನೋಬಿನಲ್ಲಿ; ಸಿಯೋನ್ ಬೆಟ್ಟದ ಕಡೆಗೆ, ಜೆರುಸಲೇಮಿನ ಗುಡ್ಡದ ಕಡೆಗೆ ಮುಷ್ಟಿ ತೋರಿಸುತ್ತಿಹರಿದೊ ಆ ದಿಕ್ಕಿಗೆ.


ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!


ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.


ನಡುಗುವಂತಾಯಿತಲ್ಲಿ ಗಡಗಡನೆ I ಪ್ರಸವ ವೇದನೆಯಂತಾಯಿತವರಿಗೆ II


ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.


ಆಗ ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು. ಅಂಥ ಗೋಳಾಟ ಈವರೆಗೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ತೇಮಾನ್ ನಾಡೇ, ನಿನ್ನ ಶೂರರು ದಿಗ್ಭ್ರಾಂತರಾಗುವರು; ಏಸಾವಿನ ಪ್ರಾಂತ್ಯದಲ್ಲಿ ಎಲ್ಲರೂ ಹತರಾಗುವರು.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು