ಯೆಶಾಯ 19:17 - ಕನ್ನಡ ಸತ್ಯವೇದವು C.L. Bible (BSI)17 ಜುದೇಯ ನಾಡು ಈಜಿಪ್ಟಿನವರಿಗೆ ಭಯಂಕರವಾಗಿರುವುದು. ಆ ನಾಡಿನ ಹೆಸರನ್ನು ಕೇಳಿದ್ದೇ ತಡ, ಪ್ರತಿಯೊಬ್ಬನೂ ಬೆಚ್ಚಿಬೀಳುವನು. ಪ್ರತಿಯೊಬ್ಬನೂ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಈಜಿಪ್ಟಿನ ವಿರುದ್ಧ ಮಾಡಿರುವ ಸಂಕಲ್ಪವನ್ನು ತಿಳಿದು ನಿಬ್ಬೆರಗಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತು ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೂದ ಪ್ರಾಂತ್ಯದವರೂ ಈಜಿಪ್ಟಿನಲ್ಲಿರುವವರೂ ಭಯಪಡಬೇಕಾಗಿದೆ. ಈಜಿಪ್ಟಿನಲ್ಲಿ ಯಾರೇ ಆಗಲಿ ಯೆಹೂದದ ಹೆಸರು ಕೇಳಿದಾಗ ಭಯಪಡುವರು. ಯಾಕೆಂದರೆ ಭಯಂಕರ ಘಟನೆಗಳು ಈಜಿಪ್ಟಿನಲ್ಲಿ ಸಂಭವಿಸುವಂತೆ ಸರ್ವಶಕ್ತನಾದ ಯೆಹೋವನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈಜಿಪ್ಟ್ ಬೆಚ್ಚಿ ಬೀಳುವುದಕ್ಕೆ ಯೆಹೂದ ದೇಶವು ಕಾರಣವಾಗುವುದು, ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನು ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿಗೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆಯನ್ನು ತಿಳಿದು ಬೆರಗಾಗುವನು. ಅಧ್ಯಾಯವನ್ನು ನೋಡಿ |