Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:19 - ಕನ್ನಡ ಸತ್ಯವೇದವು C.L. Bible (BSI)

19 ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಯೆಹೋವನಿಗೆ ಒಂದು ಯಜ್ಞಪೀಠವೂ ದೇಶದ ಎಲ್ಲೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ದಿನದಲ್ಲಿ ಈಜಿಪ್ಟ್ ದೇಶದ ಮಧ್ಯದಲ್ಲಿ ಯೆಹೋವ ದೇವರಿಗೆ ಬಲಿಪೀಠವು ದೇಶದ ಎಲ್ಲೆಯಲ್ಲಿ ಯೆಹೋವ ದೇವರಿಗೆ ಒಂದು ಸ್ತಂಭವು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:19
19 ತಿಳಿವುಗಳ ಹೋಲಿಕೆ  

ಯಕೋಬನು ಬೆಳಗಿನ ಜಾವದಲ್ಲಿ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಆ ಕಲ್ಲನ್ನು ಸ್ಮಾರಕಸ್ತಂಭವಾಗಿ ನೆಟ್ಟನು. ಅದರ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿದನು.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನಲ್ಲಿರುವ ಜೋರ್ಡನ್ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾಬಲಿಪೀಠವನ್ನು ಕಟ್ಟಿದರು.


ಈ ಕಾರಣದಿಂದಲೇ, ‘ಬನ್ನಿ, ಒಂದು ಬಲಿಪೀಠವನ್ನು ಕಟ್ಟೋಣ, ಅದು ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕಲ್ಲ,


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ನಮಗೊಂದು ಬಲಿಪೀಠವಿದೆ; ಅಲ್ಲಿ ಅರ್ಪಿಸಲಾಗುವ ಬಲಿಯನ್ನು ಭುಜಿಸಲು ಯೆಹೂದ್ಯ ಗುಡಾರಗಳಲ್ಲಿ ಸೇವೆಸಲ್ಲಿಸುವ ಯಾಜಕರಿಗೆ ಹಕ್ಕಿಲ್ಲ.


ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು I ದೇವರಿಗೆ ಕೈ ಮುಗಿವರು ಇಥಿಯೋಪಿಯದವರು II


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.


ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ ‘ಸರ್ವೇಶ್ವರನ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿ: ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.


ರೂಬೇನ್ಯರು ಹಾಗೂ ಗಾದ್ಯರು ‘ಸರ್ವೇಶ್ವರನೇ ದೇವರು’ ಎಂಬುದಕ್ಕೆ ಈ ಬಲಿಪೀಠವೇ ಸಾಕ್ಷಿ ಎಂದು ಹೇಳಿ ಅದಕ್ಕೆ ‘ಏದ್’ ಎಂದು ಹೆಸರಿಟ್ಟರು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -


ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು