Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:20 - ಕನ್ನಡ ಸತ್ಯವೇದವು C.L. Bible (BSI)

20 ಇವು ಈಜಿಪ್ಟ್ ದೇಶಕ್ಕೆ ಸರ್ವೇಶ್ವರ ಸ್ವಾಮಿಯ ಸಂಕೇತವಾಗಿಯೂ ಸಾಕ್ಷಿಯಾಗಿಯೂ ಇರುವುವು. ಅವರು ತಮ್ಮನ್ನು ಬಾಧಿಸುವವರ ವಿರುದ್ಧ ಸರ್ವೇಶ್ವರ ಸ್ವಾಮಿಗೆ ಮೊರೆಯಿಟ್ಟಾಗ, ಸ್ವಾಮಿಯು ವೀರನಾದ ರಕ್ಷಕನೊಬ್ಬನನ್ನು ಕಳುಹಿಸುವರು. ಆತನು ಆ ಜನರನ್ನು ಬಿಡುಗಡೆಮಾಡಿ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವು ಐಗುಪ್ತದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ ಸಾಕ್ಷಿಯಾಗಿಯೂ ಇರುವವು; ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನುದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದು ಸರ್ವಶಕ್ತನಾದ ಯೆಹೋವನು ಅದ್ಭುತವನ್ನು ನಡಿಸುತ್ತಾನೆಂಬುದಕ್ಕೆ ಗುರುತಾಗಿದೆ. ಜನರು ಯಾವಾಗಲಾದರೂ ಸರಿಯೇ ಸಹಾಯಕ್ಕಾಗಿ ಮೊರೆಯಿಟ್ಟರೆ ಆತನು ಸಹಾಯವನ್ನು ಕಳುಹಿಸುವನು. ಯೆಹೋವನು ಅವರನ್ನು ರಕ್ಷಿಸಲೂ ಕಾಪಾಡಲೂ ಒಬ್ಬನನ್ನು ಕಳುಹಿಸುವನು. ಆ ಮನುಷ್ಯನು ಬೇರೆಯವರಿಂದ ಶೋಷಿತರಾದವರನ್ನು ಸಂರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದು ಸೇನಾಧೀಶ್ವರ ಯೆಹೋವ ದೇವರಿಗೆ ಈಜಿಪ್ಟ್ ದೇಶದಲ್ಲಿ ಗುರುತಾಗಿ ಸಾಕ್ಷಿಯಾಗಿರುವುದು. ಏಕೆಂದರೆ ಹಿಂಸಕರ ದೆಸೆಯಿಂದ ಯೆಹೋವ ದೇವರನ್ನು ಕೂಗಿಕೊಳ್ಳಲು, ದೇವರು ಅವರಿಗೆ ಒಬ್ಬ ಶೂರನಾದ ರಕ್ಷಕನನ್ನು ಕಳುಹಿಸಿ, ಅವರನ್ನು ಬಿಡುಗಡೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:20
23 ತಿಳಿವುಗಳ ಹೋಲಿಕೆ  

ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.


“ಇದಲ್ಲದೆ ಈಜಿಪ್ಟಿನವರನ್ನು ಕ್ರೂರ ಅರಸನ ವಶಕ್ಕೆ ಒಪ್ಪಿಸುವೆನು. ರಾಜನು ದಬ್ಬಾಳಿಕೆಯಿಂದ ಅವರನ್ನು ಆಳುವನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.”


ರೂಬೇನ್ಯರು ಹಾಗೂ ಗಾದ್ಯರು ‘ಸರ್ವೇಶ್ವರನೇ ದೇವರು’ ಎಂಬುದಕ್ಕೆ ಈ ಬಲಿಪೀಠವೇ ಸಾಕ್ಷಿ ಎಂದು ಹೇಳಿ ಅದಕ್ಕೆ ‘ಏದ್’ ಎಂದು ಹೆಸರಿಟ್ಟರು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು