Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:22 - ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ಯೆಹೋವನು ಐಗುಪ್ತ್ಯರನ್ನು ಹೊಡೆಯುವನು, ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು; ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರನ್ನು ಹೊಡೆಯುವರು; ಗಾಯಮಾಡಿ ಸ್ವಸ್ಥ ಮಾಡುವರು. ಅವರು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು, ದೇವರು ಅವರನ್ನು ಆಲೈಸಿ ಸ್ವಸ್ಥ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:22
21 ತಿಳಿವುಗಳ ಹೋಲಿಕೆ  

ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಲವತ್ತು ವರ್ಷಗಳ ಮೇಲೆ ನಾನು


ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು