Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:23 - ಕನ್ನಡ ಸತ್ಯವೇದವು C.L. Bible (BSI)

23 ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ದಿನದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ರಾಜಮಾರ್ಗವಿರುವದು; ಅಶ್ಶೂರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರಕ್ಕೂ ಹೋಗಿಬರುತ್ತಿರುವರು; ಐಗುಪ್ತ್ಯರು ಅಶ್ಶೂರ್ಯರೊಂದಿಗೆ [ಯೆಹೋವನನ್ನು] ಸೇವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ಈಜಿಪ್ಟಿನಿಂದ ಅಶ್ಶೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಶೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಶೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಶೂರದವರೊಟ್ಟಿಗೆ ಕೆಲಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದಿವಸದಲ್ಲಿ ಈಜಿಪ್ಟಿನಿಂದ ಅಸ್ಸೀರಿಯಕ್ಕೆ ಹೋಗುವ ಒಂದು ರಾಜ ಮಾರ್ಗವಿರುವುದು. ಅಸ್ಸೀರಿಯದವರು ಈಜಿಪ್ಟಿಗೂ, ಈಜಿಪ್ಟಿನವರು ಅಸ್ಸೀರಿಯಕ್ಕೂ ಹೋಗಿ ಬರುವರು. ಈಜಿಪ್ಟಿನವರು, ಅಸ್ಸೀರಿಯರೊಂದಿಗೆ ಯೆಹೋವ ದೇವರನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:23
15 ತಿಳಿವುಗಳ ಹೋಲಿಕೆ  

ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


“ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಆ ದಿನದಂದು ಇಸ್ರಯೇಲ್ ಈಜಿಪ್ಟಿನೊಂದಿಗೂ ಅಸ್ಸೀರಿಯದೊಂದಿಗೂ ಸೇರುವುದು. ಈ ಮೂರು ರಾಷ್ಟ್ರಗಳು ಇಡೀ ಜಗಕ್ಕೆ ಆಶೀರ್ವಾದದ ಕೇಂದ್ರವಾಗಿ ಪರಿಣಮಿಸುವುವು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಸಮದಾರಿಯಾಗಿಸುವೆನು ನನ್ನ ಬೆಟ್ಟಗುಡ್ಡಗಳನು ಎತ್ತರಿಸುವೆನು ನನ್ನ ರಾಜಮಾರ್ಗಗಳನು.


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅಂದು ಜನರು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ನಿಮ್ಮ ಬಳಿಗೆ ಬಂದು ಸೇರುವರು. ಸಮುದ್ರದಿಂದ ಸಮುದ್ರದವರೆಗೂ ಪರ್ವತದಿಂದ ಪರ್ವತದವರೆಗೂ ಈಜಿಪ್ಟಿನಿಂದ ಯೂಫ್ರೆಟಿಸ್ ನದಿಯವರೆಗೂ ಚದರಿಹೋಗಿರುವ ಜನರೆಲ್ಲರು ನಿನ್ನೆಡೆಗೆ ಬರುವರು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು