Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:25 - ಕನ್ನಡ ಸತ್ಯವೇದವು C.L. Bible (BSI)

25 “ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಸೃಷ್ಟಿಯಾದ ಅಶ್ಶೂರಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇಲಿಗೂ ಶುಭವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸರ್ವಶಕ್ತನಾದ ಯೆಹೋವನು ಈ ದೇಶಗಳನ್ನು ಆಶೀರ್ವದಿಸುವನು. ಆತನು, “ಈಜಿಪ್ಟೇ, ನೀನು ನನ್ನವನು; ಅಶ್ಶೂರವೇ, ನಾನು ನಿನ್ನನ್ನು ನಿರ್ಮಿಸಿದೆನು. ಇಸ್ರೇಲೇ, ನೀನು ನನ್ನ ಸ್ವಾಸ್ತ್ಯ. ನೀವೆಲ್ಲರೂ ಆಶೀರ್ವದಿಸಲ್ಪಟ್ಟವರು” ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:25
30 ತಿಳಿವುಗಳ ಹೋಲಿಕೆ  

ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು.


ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.


ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II


ಇಹಪರಗಳನು ಉಂಟುಮಾಡಿದ ಪ್ರಭುವಿಂದ I ಲಭಿಸುವಂತಾಗಲಿ ನಿಮಗೆ ಆಶೀರ್ವಾದ II


ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಛರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”


ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ!


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.


ಇಸ್ರಯೇಲರಿಗೆ ಶುಭವಾಗಬೇಕು ಎಂಬುದೇ ಸರ್ವೇಶ್ವರನ ಚಿತ್ತ ಎಂದು ಅರಿತ ಬಿಳಾಮನು ಮೊದಲಿನಂತೆ ಶಕುನ ನೋಡಲು ಹೋಗಲಿಲ್ಲ. ಬದಲಿಗೆ ಮರುಭೂಮಿಯ ಕಡೆ ಮುಖ ತಿರುಗಿಸಿಕೊಂಡು ಕಣ್ಣೆತ್ತಿ ನೋಡಿದನು.


ಆ ದಿನದಂದು ಇಸ್ರಯೇಲ್ ಈಜಿಪ್ಟಿನೊಂದಿಗೂ ಅಸ್ಸೀರಿಯದೊಂದಿಗೂ ಸೇರುವುದು. ಈ ಮೂರು ರಾಷ್ಟ್ರಗಳು ಇಡೀ ಜಗಕ್ಕೆ ಆಶೀರ್ವಾದದ ಕೇಂದ್ರವಾಗಿ ಪರಿಣಮಿಸುವುವು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು