ಯೆಶಾಯ 19:3 - ಕನ್ನಡ ಸತ್ಯವೇದವು C.L. Bible (BSI)3 ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು. ಅಧ್ಯಾಯವನ್ನು ನೋಡಿ |
ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”