Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:6 - ಕನ್ನಡ ಸತ್ಯವೇದವು C.L. Bible (BSI)

6 ಕಾಲುವೆಗಳು ನಾರುವುವು. ಈಜಿಪ್ಟಿನ ಉಪನದಿಗಳು ಇಳಿದು ಇಂಗಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪ್ರವಾಹವು ಇಂಗಿ ಒಣಗುವದು, ಕಾಲುವೆಗಳು ನಾರುವವು, ಐಗುಪ್ತದ ಹೊಳೆಗಳು ಇಳಿದು ನೀರಿಲ್ಲದೆ ಹೋಗುವವು, ಆಪೂ ಜಂಬುಹುಲ್ಲೂ ಬಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಲ್ಲಾ ನದಿಗಳಿಂದ ದುರ್ವಾಸನೆ ಹೊರಡುವದು. ಈಜಿಪ್ಟಿನ ಕಾಲಿವೆಗಳು ಬತ್ತಿಹೋಗುತ್ತವೆ; ಜಲಸಸ್ಯಗಳೆಲ್ಲ ಒಣಗಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಾಲುವೆಗಳು ನಾರುವುವು. ಈಜಿಪ್ಟನ ಉಪನದಿಗಳು ದೂರಕ್ಕೆ ಇಳಿದು ನೀರಿಲ್ಲದೆ ಹೋಗುವುವು. ಜಂಬು ಹುಲ್ಲು ಬಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:6
10 ತಿಳಿವುಗಳ ಹೋಲಿಕೆ  

ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ.


ಕೆಸರಿಲ್ಲದೆ ಆಪುಹುಲ್ಲು ಬೆಳೆಯುವುದುಂಟೆ? ಜವುಗಿಲ್ಲದೆ ಜಂಬು ಹುಲ್ಲು ಮೊಳೆಯುವುದುಂಟೆ


ಪರನಾಡುಗಳಲ್ಲಿ ಬಾವಿ ತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ!’


ನದಿಯಲ್ಲಿರುವ ಮೀನುಗಳು ಸಾಯುವುವು. ನದಿಯು ಹೊಲಸಾಗಿ ನಾರುವುದು. ಅದರಲ್ಲಿ ನೀರನ್ನು ಕುಡಿಯಲು ಈಜಿಪ್ಟಿನವರಿಗೆ ಹೇಸಿಗೆಯಾಗುವುದು'.”


ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.


ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.


ಬತ್ತಿಹೋಯಿತು ನಿಮ್ರೀಮ್ ನದಿಯು, ಬಾಡಿಹೋಯಿತು ಹಸಿಹುಲ್ಲು, ಮುಗಿಯಿತು ಮೇವು, ಇಲ್ಲವಾಯಿತು ಪಚ್ಚೆಪಸಿರಾವುದು.


ಆಗ ಅಚ್ಚುಕಟ್ಟಾದ ಏಳು ಕೊಬ್ಬಿದ ಹಸುಗಳು ಆ ನದಿಯೊಳಗಿಂದ ಬಂದು ಜೊಂಡು ಹುಲ್ಲಿನಲ್ಲಿ ಮೇಯುತ್ತಿದ್ದವು.


“ನೀನು ತೇಬೆಸ್ಸಿಗಿಂತ ಸುಭದ್ರಳೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು. ಮಹಾನದಿ ಅದಕ್ಕೆ ಕೋಟೆಯಾಗಿತ್ತು. ಜಲಾಶಯವು ಅದರ ದುರ್ಗವಾಗಿತ್ತು.


ಆದರೂ ಮಿಕ್ಕ ಎಲ್ಲ ಸಸಿಗಳಿಗಿಂತ ಬಲು ಮುಂಚಿತವಾಗಿಯೆ ಒಣಗಿಹೋಗುತ್ತವೆ ಅವು ಯಾರೂ ಕೊಯ್ಯದೆಯೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು