Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:10 - ಕನ್ನಡ ಸತ್ಯವೇದವು C.L. Bible (BSI)

10 ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ದೂಳಿನಲ್ಲಿ ಅವುತುಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ. ಧೂಳಿನಲ್ಲಿ ನೀನು ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:10
22 ತಿಳಿವುಗಳ ಹೋಲಿಕೆ  

ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.


ಅವರೆಲ್ಲರನು ಧೂಳಿನಲ್ಲಿ ಒಟ್ಟಿಗೆ ಅಡಗಿಸಿಬಿಡು ಅವರ ಮುಖಕ್ಕೆ ಅಧೋಲೋಕದಲಿ ಮುಸುಕುಹಾಕು.


ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II


ಈಜುವವರು ಕೈಯಾಡಿಸುವಂತೆ ಮೋವಾಬ್ ರೊಚ್ಚಿನಲ್ಲಿ ಕೈಯಾಡಿಸುವುದು. ಅದರ ಗರ್ವವನ್ನೂ ಕೈಚಳಕವನ್ನೂ ಸರ್ವೇಶ್ವರ ಸ್ವಾಮಿ ಅಡಗಿಸಿಬಿಡುವರು.


“ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು.


“ನಿನೆವೆಯೇ, ನೀನು ಸಹ ಮತ್ತಳಾಗಿ ತತ್ತರಿಸುವೆ. ಶತ್ರುಗಳಿಂದ ಆಶ್ರಯ ಕೋರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು