Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:11 - ಕನ್ನಡ ಸತ್ಯವೇದವು C.L. Bible (BSI)

11 ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:11
61 ತಿಳಿವುಗಳ ಹೋಲಿಕೆ  

ದೀನದಲಿತರನು ಉದ್ಧರಿಸುವವನು ನೀನು I ತಗ್ಗಿಸಿಬಿಡುವೆಯಲ್ಲವೆ ಪ್ರಭು, ಸೊಕ್ಕಿನ ಲೋಚಕರನು? II


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.


ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನಗಳಲ್ಲಿ ನಾನು ಅಂಗಹೀನರಾದವರನ್ನು ಒಟ್ಟುಗೂಡಿಸುವೆನು. ಹೊರದೂಡಲಾದವರನ್ನು ಮತ್ತು ಸಂಕಟಕ್ಕೆ ಈಡಾದವರನ್ನು‍ ಒಂದಾಗಿ ಸೇರಿಸುವೆನು.


ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.


ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


“ಹೆಚ್ಚಳಪಡುವವನು ಪ್ರಭುವಿನಲ್ಲೇ ಹೆಚ್ಚಳಪಡಲಿ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


ಸ್ವಜನರನು ದೇವ ಸರ್ವೇಶ್ವರ ಕಾಪಾಡುವನು ಮೇಷಪಾಲನಂತೆ ನಾಡಿನೊಳು ಥಳಥಳಿಸುವರವರು ಕಿರೀಟದ ರತ್ನಗಳಂತೆ.


ಜೆರುಸಲೇಮಿಗೆ ಈ ಪರಿ ಹೇಳುವರು ಆ ದಿನದೊಳು: “ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು.”


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ಕುದುರೆಗಳನ್ನು ಕಡಿದುಬಿಡುವೆನು. ನಿಮ್ಮ ರಥಗಳನ್ನು ಧ್ವಂಸಮಾಡುವೆನು.


ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಲ್ಲಿ ಎದೋಮಿನ ಜ್ಞಾನಿಗಳನ್ನೂ ಏಸಾವಿನ ಪರ್ವತದ ಬುದ್ಧಿಜೀವಿಗಳನ್ನೂ ನಾನು ಅಳಿಸದೆ ಬಿಡುವೆನೋ?


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ.


“ಆ ದಿನದಲ್ಲಿ ನಾನು ಇಸ್ರಯೇಲಿನೊಳಗೆ ಲವಣಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ‘ಹಮೋನ್ ಗೋಗ್’ ಕಣಿವೆ ಎನಿಸಿಕೊಳ್ಳುವುದು.


ನಾನು ರೋಷಾನಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ: ಆಹಾ, ಆ ದಿನದಲ್ಲಿ, ಇಸ್ರಯೇಲ್ ನಾಡಿನೊಳಗೆ ಅದ್ಭುತಕಂಪನವಾಗುವುದು ಖಂಡಿತ;


“ಹೀಗಿರಲು ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನನ್ನ ಜನರಾದ ಇಸ್ರಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನನಗೆ ಗೊತ್ತಾಗುವುದಿಲ್ಲವೆ?


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ವವನ್ನು ಒಂದು ದಿನ ಅರಿತುಕೊಳ್ಳುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಆ ಕಾಲ ಬಂದಾಗ ಏಳುಮಂದಿ ಅವಿವಾಹಿತ ಮಹಿಳೆಯರು ಒಬ್ಬ ಪುರುಷನನ್ನು ಹಿಡಿದುಕೊಂಡು: “ನಾವು ಸ್ವಂತವಾಗಿ ದುಡಿದು ಊಟಮಾಡುತ್ತೇವೆ, ಸ್ವಂತವಾಗಿ ಸಂಪಾದನೆಮಾಡಿ ಬಟ್ಟೆ ಉಡುತ್ತೇವೆ. ನೀನು ನಮ್ಮ ಯಜಮಾನನೆನಿಸಿಕೊಂಡು ನಮ್ಮ ಮಾನವನ್ನು ಕಾಪಾಡಿದರೆ ಸಾಕು,” ಎಂದು ಕೋರುವರು.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ದೀನದಲಿತರನು ಉದ್ಧರಿಸುವನು ಗರ್ವಿಗಳನು ಗುರುತಿಸಿ ತಗ್ಗಿಸುವನು.


ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಮೇಲಿಂದ ಮೇಲಕ್ಕೆ ದೃಷ್ಟಿಸಿ ನೋಡುವ, ಠೀವಿಯಿಂದ ಕಣ್ಣುರೆಪ್ಪೆಗಳನ್ನೇರಿಸುವ ಜನರುಂಟು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II


ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.


ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು.


ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು