Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:17 - ಕನ್ನಡ ಸತ್ಯವೇದವು C.L. Bible (BSI)

17 ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:17
11 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.


ವಿಗ್ರಹಗಳು ಸಂಪೂರ್ಣವಾಗಿ ಮಾಯವಾಗುವುವು.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು