ಯೆಶಾಯ 2:2 - ಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.