Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:22 - ಕನ್ನಡ ಸತ್ಯವೇದವು C.L. Bible (BSI)

22 ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:22
14 ತಿಳಿವುಗಳ ಹೋಲಿಕೆ  

ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !


ನಂಬಬೇಡ ಅಧಿಕಾರಿಯನು I ನೆಚ್ಚಬೇಡ ನರಮಾನವನನು I ಉದ್ಧರಿಸಲು ಅಸಮರ್ಥನವನು II


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II


ಆತನ ಗಣನೆಗೆ ರಾಷ್ಟ್ರಗಳು ಕಪಿಲೆಯಿಂದ ಉದುರುವ ತುಂತುರುಗಳು ತ್ರಾಸಿನ ತಟ್ಟೆಯ ಮೇಲಿರುವ ಧೂಳಿನ ಕಣಗಳು ದ್ವೀಪಗಳೋ ಆತನ ತೂಕಕ್ಕೆ ಅಣುರೇಣುಗಳು.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಉಸಿರಾಡುವ ಭೂಮಿಯ ಜಂತುಗಳೆಲ್ಲ ಸತ್ತುಹೋದವು.


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ನನ್ನಲ್ಲಿ ಜೀವ ಉಸಿರಾಡುತ್ತಿರುವವರೆಗೆ, ನನ್ನ ಮೂಗಲ್ಲಿ ದೇವರು ಊದಿದ ಶ್ವಾಸವಿರುವವರೆಗೆ,


ಸಕಲ ರಾಷ್ಟ್ರಗಳು ಆತನ ದೃಷ್ಟಿಗೆ ಏನೂ ಇಲ್ಲದಂತೆ ಅವುಗಳು ಆತನ ಎಣಿಕೆಗೆ ಶುದ್ಧ ಸೊನ್ನೆಯಂತೆ.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು