Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:3 - ಕನ್ನಡ ಸತ್ಯವೇದವು C.L. Bible (BSI)

3 ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:3
39 ತಿಳಿವುಗಳ ಹೋಲಿಕೆ  

ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


ಇವರು ಕರೆದುತರುವರು ಅನ್ಯಜನಗಳನು ಮಲೆನಾಡಿಗೆ ಅರ್ಪಿಸತರುವರು ನ್ಯಾಯಯುತವಾದ ಬಲಿಗಳನು ಅಲ್ಲಿಗೆ. ಸವಿವರು ಕಡಲ ಸಿರಿಯನು ನೆಲದಲ್ಲಡಗಿರುವ ಸಂಪದವನು.”


ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II


ನನಗೆ ಕಲಿಸಿರುವೆ ನಿನ್ನ ನಿಬಂಧನೆಗಳನು I ನನ್ನ ಬಾಯಿ ಉಸುರಲಿ ನಿನ್ನ ಗುಣಗಾನವನು II


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಇವರು ನನ್ನನ್ನು ಕುರಿತು : “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?


ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವುದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಬೇಕು;


ನಡುಹಾದಿಯಲೆ ಕುಂದಿಸಿಹನು ಪ್ರಭು ನನ್ನ ಬಲವನು I ಕಡಿಮೆಮಾಡಿಬಿಟ್ಟಿಹನು ಆತ ನನ್ನ ಆಯುಷ್ಯವನು II


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು.


ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”


ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು