Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:5 - ಕನ್ನಡ ಸತ್ಯವೇದವು C.L. Bible (BSI)

5 ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕೋಬನ ಮನೆತನದವರೇ, ಬನ್ನಿರಿ, ಯೆಹೋವನ ಜ್ಞಾನಪ್ರಕಾಶದಲ್ಲಿ ನಡೆಯುವ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:5
16 ತಿಳಿವುಗಳ ಹೋಲಿಕೆ  

ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ನಿನ್ನನರಿತವರನು ಪ್ರೀತಿಸು ಮುಂದಕ್ಕೂ I ಒಳಿತನ್ನು ಮಾಡು ನೇರಮನಸ್ಕರಿಗೂ II


ಆನಂದಿಸುವರವರು ಸದಾ ನಿನ್ನ ನಾಮದಲಿ I ಪ್ರವರ್ಧಿಸುವರವರು ನಿನ್ನ ನ್ಯಾಯನೀತಿಯಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು