Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:6 - ಕನ್ನಡ ಸತ್ಯವೇದವು C.L. Bible (BSI)

6 ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕೋಬನ ಮನೆತನದವರು ಮೂಡಣ ದೇಶಗಳ [ಮಂತ್ರತಂತ್ರಗಳಲ್ಲಿ] ಮಗ್ನರೂ ಫಿಲಿಷ್ಟಿಯರ ಹಾಗೆ ಕಣಿಹೇಳುವವರೂ ಅನ್ಯದೇಶಗಳವರ ಸಂಗಡ ಒಪ್ಪಂದಮಾಡುವವರೂ ಆಗಿರುವದರಿಂದ ಈ ನಿನ್ನ ಜನರನ್ನು ಕೈಬಿಟ್ಟಿದ್ದೀಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಕೋಬಿನ ಮನೆತನದವರು ಪೂರ್ವದೇಶಗಳ ಮಂತ್ರತಂತ್ರಗಳಲ್ಲಿ ಮಗ್ನರಾಗಿ, ಫಿಲಿಷ್ಟಿಯರಂತೆ ಕಣಿ ಹೇಳುವವರಾಗಿಯೂ, ಬೇರೆ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆಯುಳ್ಳವರಾಗಿಯೂ ಇರುವುದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:6
31 ತಿಳಿವುಗಳ ಹೋಲಿಕೆ  

ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.


ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.


ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?


“ಅನ್ಯಜನಾಂಗಗಳ ಆಚರಣೆಯನ್ನು ಅನುಸರಿಸಬೇಡಿ ಅವರು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿ.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನಿಗಾಗಿ ಕೈಮೇಲೆ ಕೈಯಿಟ್ಟು ಪ್ರಮಾಣಮಾಡಿದ್ದರೆ,


ಅನ್ಯಜನರೊಡನವರು ಕಲೆತು ಬೆರೆತುಹೋದರು I ಅವರ ದುರಾಚಾರಗಳನ್ನೂ ಕಲಿತುಕೊಂಡರು II


ಅದೇ ಕಾಲದಲ್ಲಿ ಅಷ್ಡೋದ್, ಅಮ್ಮೋನಿಯ ಹಾಗು ಮೋವಾಬ್ ಮಹಿಳೆಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ನಾನು ವಿಚಾರಮಾಡಿದೆ.


ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


“ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.


ಅದೂ ಅಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಹೆಣ್ಣುಗಳನ್ನು ತೆಗೆದುಕೊಳ್ಳುವುದಕ್ಕೆ ಆಸ್ಪದವುಂಟಾಗುವುದು. ಅನಂತರ ಆ ಸೊಸೆಯಂದಿರು ತೌರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನು ಅನ್ಯದೇವರುಗಳ ಪೂಜೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು. ಆದ್ದರಿಂದ ಎಚ್ಚರಿಕೆಯಾಗಿರಿ.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


“ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.


ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು.


ಸ್ವಾಮಿಯ ಆ ಯಜ್ಞದ ದಿನದಂದು ನಾನು ದೇಶಾಧಿಪತಿಗಳನ್ನು, ರಾಜವಂಶದವರನ್ನು, ಹಾಗೂ ಅನ್ಯಮತೀಯ ವಸ್ತ್ರಧಾರಿಗಳನ್ನು ದಂಡಿಸುವೆನು.


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ಕೋಟೆಕೊತ್ತಲಗಳನ್ನು ಕೆಡವಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು