Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:7 - ಕನ್ನಡ ಸತ್ಯವೇದವು C.L. Bible (BSI)

7 ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ, ಇವರ ನಿಧಿ ನಿಕ್ಷೇಪಗಳಿಗೆ ವಿುತಿಯಿಲ್ಲ; ಇವರ ದೇಶವು ಅಶ್ವಬಲಭರಿತವಾಗಿದೆ, ಇವರ ರಥಗಳಿಗೆ ಪಾರವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ. ಅವರ ಬೊಕ್ಕಸಗಳಿಗೆ ಮಿತಿಯಿಲ್ಲ. ಅವರ ದೇಶವು ಕುದುರೆಗಳಿಂದ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:7
15 ತಿಳಿವುಗಳ ಹೋಲಿಕೆ  

ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ಕುದುರೆಗಳನ್ನು ಕಡಿದುಬಿಡುವೆನು. ನಿಮ್ಮ ರಥಗಳನ್ನು ಧ್ವಂಸಮಾಡುವೆನು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು.


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ಮನೆಗಳಲ್ಲಿ ತಮಗಾಗಿ ಬೆಳ್ಳಿಬಂಗಾರಗಳನ್ನು ತುಂಬಿಸಿಕೊಂಡಿದ್ದ ಅಧಿಪತಿಗಳೊಡನೆ ನಾನು ಶ್ರಮಿಸುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು