Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:8 - ಕನ್ನಡ ಸತ್ಯವೇದವು C.L. Bible (BSI)

8 ದೇಶದಲ್ಲಿ ವಿಗ್ರಹಗಳು ತುಂಬಿ ತುಳುಕುತ್ತಿವೆ. ಜನರು ತಮ್ಮ ಕೈಯಿಂದ ಮಾಡಿದ ವಿಗ್ರಹಗಳನ್ನೇ ಪೂಜಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವರ ದೇಶವು ವಿಗ್ರಹಗಳಿಂದಲೂ ತುಂಬಿದೆ, ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ದೇಶವು ಕೈಯಿಂದ ಮಾಡಿದ ವಿಗ್ರಹಗಳಿಂದ ತುಂಬಿದ್ದು ಜನರು ಅವುಗಳನ್ನು ಆರಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ದೇಶವು ವಿಗ್ರಹಗಳಿಂದ ತುಂಬಿದೆ. ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:8
28 ತಿಳಿವುಗಳ ಹೋಲಿಕೆ  

ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು.


ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.


ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.


ತನ್ನ ತಂದೆಯಾದ ಉಜ್ಜೀಯನಂತೆ ಇವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ಅವನಂತೆ ಸರ್ವೇಶ್ವರನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.


ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.


ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.


ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.


ವಿಗ್ರಹವಾದರೋ ಎರಕ ಹೊಯ್ಯಲ್ಪಟ್ಟಿತು ಶಿಲ್ಪಿಯಿಂದ ಅದಕ್ಕೆ ಬಡಿದಿರುವ ಚಿನ್ನದ ಕವಚ ಅಕ್ಕಸಾಲಿಗನಿಂದ ಅದಕ್ಕೆ ತೊಡಿಸಿರುವ ಬೆಳ್ಳಿಸರಪಣಿ ಆ ವಾಜನಿಂದ.


ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !


ನನ್ನ ಸ್ವಜನರು ನನ್ನನ್ನೆ ತೊರೆದುಬಿಟ್ಟು, ಅನ್ಯದೇವತೆಗಳಿಗೆ ಬಲಿಯರ್ಪಿಸಿ, ತಮ್ಮ ಕೈಯಿಂದ ನಿರ್ಮಿಸಿದ ಮೂರ್ತಿಗಳಿಗೆ ಆರಾಧನೆ ಮಾಡುತ್ತಿದ್ದಾರೆ; ಇಂಥ ಅಧರ್ಮಕ್ಕೆಲ್ಲ ನಾನು ಅವರಿಗೆ ವಿಧಿಸುವ ದಂಡನೆಗಳನ್ನು ತಿಳಿಸುವೆನು, ಕೇಳು :


ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು.


ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು;


ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು