ಯೆಶಾಯ 21:1 - ಕನ್ನಡ ಸತ್ಯವೇದವು C.L. Bible (BSI)1 ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕಡಲಡವಿಯ ವಿಷಯವಾದ ದೈವೋಕ್ತಿ. ದಕ್ಷಿಣಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ [ದೊಡ್ಡ ಅವಾಂತರ] ಬರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ. ಅಧ್ಯಾಯವನ್ನು ನೋಡಿ |