ಯೆಶಾಯ 21:10 - ಕನ್ನಡ ಸತ್ಯವೇದವು C.L. Bible (BSI)10 ನನ್ನ ಪ್ರಜೆಯೇ, ನನ್ನ ಕಣಜದ ದವಸವೇ, ಬಡಿತಕ್ಕೆ ಈಡಾದ ಜನರೇ, ಇಸ್ರಯೇಲರ ದೇವರಾದ ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯಿಂದ ನಾನು ಕೇಳಿದ್ದನ್ನೇ ತಿಳಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ, ಇಸ್ರಾಯೇಲ್ಯರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ. ಅಧ್ಯಾಯವನ್ನು ನೋಡಿ |
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”