Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:13 - ಕನ್ನಡ ಸತ್ಯವೇದವು C.L. Bible (BSI)

13 ಅರೇಬಿಯ ವಿಷಯವಾದ ದೈವೋಕ್ತಿ : ದೇದಾದಿನ ಜನರೇ, ಒಂಟೆ ಸವಾರರೇ, ಅರೇಬಿಯದ ಮರುಭೂಮಿಯಲ್ಲಿ ಬೀಡು ಬಿಡುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಬಿಯ ವಿಷಯವಾದ ದೈವೋಕ್ತಿ. ಸಾರ್ಥವಾಹರಾದ ದೇದಾನ್ಯರೇ, ಮರುಭೂವಿುಯ ಪೊದೆಗಳಲ್ಲಿ ಇಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:13
14 ತಿಳಿವುಗಳ ಹೋಲಿಕೆ  

ದೆದಾನಿನವರು ನಿನ್ನ ವರ್ತಕರಾಗಿದ್ದರು; ಬಹುದ್ವೀಪಗಳ ಉತ್ಪತ್ತಿ ನಿನ್ನ ಕೈಗೆ ಸೇರಿತ್ತು. ಗಜದಂತಗಳನ್ನೂ, ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.


ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಇವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನ್‍ನಿಗೆ ಶೆಬಾ ಮತ್ತು ದೆದಾನ್ ಎಂಬಿಬ್ಬರು ಮಕ್ಕಳು ಹುಟ್ಟಿದರು.


ಯೊಕ್ಷಾನನು ಶೆಬಾ, ದೆದಾನ್ ಎಂಬವರನ್ನು ಪಡೆದನು. ಅಶ್ಯೂರ್ಯರು, ಲೆಟೂಶ್ಯರೂ ಲೆಯುಮ್ಯರು ದೆದಾನನಿಂದ ಹುಟ್ಟಿದರು.


ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.


ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.


ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ :


ಸೆಬ, ಹವೀಲ, ಸಬ್ತ, ರಮ್ಮಸಬ್ತೆಕಾಗಳ ಜನರು ಕೂಷನ ಸಂತತಿಯವರು. ಶೆಬ ಮತ್ತು ದೆದಾನಿನವರು ರಮ್ಮ ಸಂತಾನದವರು. (


ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.


ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.


ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು