Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ನನಗೆ ಹೀಗೆಂದರು : “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನು ನನಗೆ ಹೇಳಿರುವದೇನಂದರೆ - ಆಳಿನ ವರುಷ ವಾಯಿದೆಗೆ ಸರಿಯಾದ ಒಂದು ವರುಷಕ್ಕೇ ಕೇದಾರಿನ ಸಕಲ ವೈಭವವು ಇಲ್ಲವಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:16
11 ತಿಳಿವುಗಳ ಹೋಲಿಕೆ  

ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


“ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.


ಘೋಷಿಸಲಿ ಮರುಭೂಮಿಯೂ ಅದರ ನಗರಗಳೂ ಕೇದಾರಿನವರೂ ಗ್ರಾಮನಿವಾಸಿಗಳೂ ಜಯಘೋಷಮಾಡಲಿ ಸೆಲ ಪಟ್ಟಣದವರೂ ಸಂತೋಷದಿಂದ ಹರ್ಷಧ್ವನಿಗೈಯಲಿ ಆ ಪರ್ವತದ ತುತ್ತತುದಿಗಳಿಂದ.


ಇಷ್ಮಾಯೇಲನ ಮಕ್ಕಳಿಗೂ ಅವರಿಂದ ಹುಟ್ಟಿದ ಕುಲಗಳಿಗೂ ಇಡಲಾಗಿದ್ದ ಹೆಸರುಗಳು ಇವು - ಮೊದಲು ಹುಟ್ಟಿದವನು ನೆಬಾಯೋತ್, ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,


“ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ.


ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು - ನೆಬಾಯೋತ್, (ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ), ಕೇದಾರ್, ಅದ್ಬೆಯೇಲ್, ಮಿಬ್ಸಾಮ್,


“ಸೈಪ್ರಸ್ ದ್ವೀಪಗಳಿಗೆ ಹೋಗಿ ನೋಡಿ; ಕೇದಾರ್ ನಾಡಿಗೆ ಕಳಿಸಿ ವಿಚಾರಮಾಡಿ, ಇಂಥ ಕಾರ್ಯ ಎಲ್ಲಿಯಾದರು ನಡೆಯಿತೆ ಎಂದು ಚೆನ್ನಾಗಿ ಆಲೋಚಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು