Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:2 - ಕನ್ನಡ ಸತ್ಯವೇದವು C.L. Bible (BSI)

2 ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ; ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತು! ನಿಮ್ಮ ನಿಟ್ಟುಸುರನ್ನು ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:2
44 ತಿಳಿವುಗಳ ಹೋಲಿಕೆ  

ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿ ಯೆರೆಮೀಯನಿಗೆ ನೀಡಲಾಯಿತು:


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.


“ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯದ ಮತ್ತು ಪರ್ಷಿಯದ ರಾಜ್ಯ.


“ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”


ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.”


“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


“ಬಿಲ್ಲುಗಾರರೇ, ನೀವೆಲ್ಲರು ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆಹಾಕಿರಿ. ಬಾಣಗಳನ್ನು ಮಿಗಿಸದೆ ಎಸೆಯಿರಿ. ಅದು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದೆ.


ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಏಲಾಮಿನ ಸೈನಿಕರು ಬಿಲ್ಲುಬಾಣಗಳನ್ನೂ, ರಥಾಶ್ವಗಳನ್ನೂ ಸಜ್ಜುಗೊಳಿಸಿರುವರು. ಕೀರಿನವರು ಗುರಾಣಿಗಳನ್ನು ಅಣಿಗೊಳಿಸಿರುವರು.


ಸುಬುದ್ಧಿ ದಯಾಸ್ಪದ; ದುರಾಚಾರ ವಿನಾಶಕರ.


ಸೆರೆಹೋಗಿರುವವರ ನರಳಾಟಕೆ ಕಿವಿಗೊಡು ನೀನು I ನಿನ್ನ ಶಕ್ತಿ ಕಾದಿಡಲಿ ಸಾವಿಗೀಡಾಗಿರುವ ಅವರನು II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ಆ ದ್ರೋಹಿಗಳನು ಕಂಡಾಗ ಆಗುತಿದೆ ಅಸಹ್ಯ I ಏಕೆನೆ ನಿನ್ನ ನುಡಿಯಂತೆ ಅವರು ನಡೆಯರಯ್ಯಾ II


ಆಗ ರಾಜ ಬೇಲ್ಶಚ್ಚರನು ಬಹಳ ಕಳವಳಗೊಂಡನು. ಅವನ ಮುಖ ಕಳೆಗುಂದಿತು. ಅವನ ಸಾಮಂತರು ದಿಕ್ಕುತೋಚದವರಾದರು.


ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.


ಕಟ್ಟಕಡೆಗೆ ಶಾಂತಿಯಿಂದ ಸುರಕ್ಷಿತವಾಗಿದೆ ಜಗವೆಲ್ಲ ಹರ್ಷಧ್ವನಿಗೈಯುತ ಹಾಡುತಿಹರು ಜನರೆಲ್ಲ.


ಏಲಾಮಿನ ಎಲ್ಲ ಅರಸರು, ಮೇದ್ಯರ ಎಲ್ಲ ಅರಸರು;


ಸೇನಾಧೀಶ್ವರ ಸರ್ವೇಶ್ವರ ಹೀಗೆಂದರು - “ಇಗೋ, ಏಲಾಮಿನ ಮುಖ್ಯ ಬಲವಾದ ಬಿಲ್ಲನ್ನು ಮುರಿದುಬಿಡುವೆನು.


ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು