ಯೆಶಾಯ 21:8 - ಕನ್ನಡ ಸತ್ಯವೇದವು C.L. Bible (BSI)8 ಬಳಿಕ ಪಹರೆಯವನು ಸಿಂಹಧ್ವನಿಯಿಂದ : “ಸ್ವಾಮಿ, ಹಗಲೆಲ್ಲಾ ಕಾವಲು ಗೋಪುರದಲ್ಲಿ ನಿಂತಿದ್ದೇನೆ. ರಾತ್ರಿಯಲ್ಲೂ ಕಾವಲುಗೈದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಳಿಕ ಅವನು ಸಿಂಹಧ್ವನಿಯಿಂದ - ಕರ್ತನೇ, ಹಗಲೆಲ್ಲಾ ಕೋವರದಲ್ಲಿ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಅಧ್ಯಾಯವನ್ನು ನೋಡಿ |
ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?