Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:12 - ಕನ್ನಡ ಸತ್ಯವೇದವು C.L. Bible (BSI)

12 ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:12
31 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.


ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


ನೋಡಿದಿರಿ ಈಜಿಪ್ಟಿನಲಿ ನಮ್ಮ ಪಿತೃಗಳು ಪಟ್ಟ ಕಷ್ಟವನು ಆಲಿಸಿದಿರಿ ಕೆಂಪುಸಮುದ್ರದ ಬಳಿ ಅವರಿಟ್ಟ ಮೊರೆಯನು.


ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.


ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.


ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.


ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.


ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ.


“ಔತಣದ ಮನೆಗೂ ಹೋಗಬೇಡ. ಅಲ್ಲಿಯವರೊಡನೆ ಕುಳಿತು, ತಿಂದು, ಕುಡಿಯಬೇಡ,


ತಲೆ ಬೋಳಿಸಿಕೊಂಡು, ಗೋಣಿತಟ್ಟನು ಸುತ್ತಿಕೊಂಡು, ದುಃಖಿಸಿ ಗೋಳಾಡುವರು, ಅಳುವರು ನಿನಗಾಗಿ ನಿಟ್ಟುಸಿರಿಟ್ಟು;


ಬೇಲ್ಶಚ್ಚರ ಎಂಬ ಅರಸನು ತನ್ನ ರಾಜ್ಯದ ಪ್ರಮುಖರಲ್ಲಿ ಸಾವಿರ ಮಂದಿಯನ್ನು ಸೇರಿಸಿ ಒಂದು ಔತಣವನ್ನು ಏರ್ಪಡಿಸಿದ. ಆ ಸಾವಿರ ಜನರ ಮುಂದೆ ಅವನೂ ದ್ರಾಕ್ಷಾರಸವನ್ನು ಕುಡಿದ.


ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.


ಮದುವೆಯಾಗಲಿದ್ದ ಯುವಕನನ್ನು ಕಳೆದುಕೊಂಡದ್ದಕ್ಕಾಗಿ ಗೋಣಿತಟ್ಟನ್ನು ಉಟ್ಟು ಗೋಳಾಡುವ ಯುವತಿಯಂತೆ ರೋದಿಸಿರಿ.


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು.


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ : “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ


ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು