ಯೆಶಾಯ 22:13 - ಕನ್ನಡ ಸತ್ಯವೇದವು C.L. Bible (BSI)13 ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ. ಅವರು ಹರ್ಷಿಸುತ್ತಾ: “ದನಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ. ಅಧ್ಯಾಯವನ್ನು ನೋಡಿ |