ಯೆಶಾಯ 22:21 - ಕನ್ನಡ ಸತ್ಯವೇದವು C.L. Bible (BSI)21 ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇವಿುನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿನ್ನ ಬಟ್ಟೆಯನ್ನು ತೆಗೆದು ಆ ಸೇವಕನಿಗೆ ಕೊಡುವೆನು. ನಿನ್ನ ರಾಜದಂಡವನ್ನು ಅವನಿಗೆ ಕೊಡುವೆನು. ನಿನ್ನ ವಿಶೇಷ ಹುದ್ದೆಯನ್ನು ಅವನಿಗೆ ಕೊಡುವೆನು. ಆ ಸೇವಕನು ಯೆಹೂದದ ಜನರಿಗೂ ಜೆರುಸಲೇಮಿನ ಜನರಿಗೂ ತಂದೆಯಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು. ಅಧ್ಯಾಯವನ್ನು ನೋಡಿ |