Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:4 - ಕನ್ನಡ ಸತ್ಯವೇದವು C.L. Bible (BSI)

4 “ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:4
20 ತಿಳಿವುಗಳ ಹೋಲಿಕೆ  

ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು.


ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ಇಗೋ, ವೀರರು ಹೊರಗೆ ಹಾಹಾಕಾರ ಮಾಡುತಿಹರು. ಶಾಂತಿದೂತರಾದ ರಾಯಭಾರಿಗಳು ಘೋರವಾಗಿ ಅಳುತಿಹರು.


ಗೋಣಿತಟ್ಟನುಟ್ಟು ತಿರುಗುತಿಹರು ಹಾದಿಬೀದಿಗಳಲಿ, ಕಣ್ಣೀರಿಡುತ ಸೊರಗಿಹರು ಮಳಿಗೆಗಳಲಿ, ಬೀದಿ ಚೌಕಗಳಲಿ.


ಜನರು : “ಅವರು ತ್ವರೆಯಾಗಿ ಬಂದು ನಮಗೋಸ್ಕರ ಗೋಳೆತ್ತಲಿ ನಮ್ಮ ಕಣ್ಣುಗಳಿಂದ ನೀರು ಧಾರಾಕಾರವಾಗಿ ಸುರಿವಂತೆ ಮಾಡಲಿ ಕಣ್ಣಿನ ರೆಪ್ಪೆಗಳಿಂದ ನೀರು ಉಕ್ಕಿ ಹರಿವಂತೆ ಮಾಡಲಿ.”


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ತಲೆ ಬೋಳಿಸಿಕೊಂಡು, ಗೋಣಿತಟ್ಟನು ಸುತ್ತಿಕೊಂಡು, ದುಃಖಿಸಿ ಗೋಳಾಡುವರು, ಅಳುವರು ನಿನಗಾಗಿ ನಿಟ್ಟುಸಿರಿಟ್ಟು;


ನಡೆದ ಸಂಗತಿಯನ್ನೆಲ್ಲಾ ಕೇಳಿದಾಗ, ಮೊರ್ದೆಕೈ ತನ್ನ ಬಟ್ಟೆಗಳನ್ನು ಹರಿದು ಗೋಣಿತಟ್ಟನ್ನು ಉಟ್ಟು, ಬೂದಿಯನ್ನು ಸುರಿದುಕೊಂಡು ನಗರದ ಮಧ್ಯೆ ಹೋಗುತ್ತಾ ಅಪಾರ ದುಃಖದಿಂದ ಗೋಳಾಡಿದನು.


ಬಳಕೆಗೆ ಸಿದ್ಧವಿರಲೆಂದು ಕೊಡಲಾಗಿದೆ ಆ ಖಡ್ಗ ಮಸೆಯಲಿಕ್ಕೆ ಮಸೆದು, ಸಾಣೆ ಹಿಡಿದು, ಸಜ್ಜಾಗಿದೆ ಅದು ಹತ್ಯಗಾರನ ಹಿಡಿತಕ್ಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು