Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:5 - ಕನ್ನಡ ಸತ್ಯವೇದವು C.L. Bible (BSI)

5 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಕಳುಹಿಸಿರುವ ದಿನವಿದು - ದಿವ್ಯದರ್ಶನದ ಕಣಿವೆಯ ದಿನ, ಗಲಿಬಿಲಿಯ ದಿನ, ತುಳಿದಾಟದ ದಿನ, ಭಯಭ್ರಾಂತಿಯ ದಿನ, ಕೋಟೆಕೊತ್ತಲಗಳನ್ನು ಹೊಡೆದುರುಳಿಸುವ ದಿನ. ಕೂಗಾಟವು ಬೆಟ್ಟದಲ್ಲಿ ಮಾರ್ದನಿಸುವ ದಿನ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು, ದರ್ಶನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಭಯಭ್ರಾಂತಿಯ ದಿನವನ್ನು ಇಟ್ಟಿದ್ದಾರೆ. ಅದು ಗೋಡೆಗಳು ಹೊಡೆದುರುಳಿಸುವ ದಿನವು. ಪರ್ವತಗಳಿಗೆ ಜನರು ಕೂಗಾಡುವ ದಿನವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:5
22 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.


ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.


ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !


ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ : ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?


(ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ). ಆಗ ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ.


ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.


ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.


ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.


ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ , ಅದು ಬರೀ ಗೋಳೇ!


ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;


ಸಿಯೋನ್ ನಗರಿಯ ಕೋಟೆಯನ್ನು ನಾಶಪಡಿಸಲೆಂದು ಎಳೆದಿರುವನಲ್ಲಾ ಸರ್ವೇಶ್ವರ ಅಳತೆನೂಲನ್ನು ! ಹಾಳುಮಾಡುವ ತನ್ನ ಕೈಯನ್ನು ಹಿಂದೆಗೆಯದೆ ಬಿರುಕುಗೊಳಿಸಿದ್ದಾನೆ ಪೌಳಿಗೋಡೆಯನ್ನೇ, ಕೋಟೆಯನ್ನೇ, ಅವುಗಳೆರಡೂ, ಕುಸಿದು ಬಿದ್ದುಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು