Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:6 - ಕನ್ನಡ ಸತ್ಯವೇದವು C.L. Bible (BSI)

6 ಏಲಾಮಿನ ಸೈನಿಕರು ಬಿಲ್ಲುಬಾಣಗಳನ್ನೂ, ರಥಾಶ್ವಗಳನ್ನೂ ಸಜ್ಜುಗೊಳಿಸಿರುವರು. ಕೀರಿನವರು ಗುರಾಣಿಗಳನ್ನು ಅಣಿಗೊಳಿಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏಲಾಮು ರಥಾಶ್ವಪದಾತಿಗಳಿಂದ ಬತ್ತಳಿಕೆಯನ್ನು ಧರಿಸಿತು; ಕೀರಿನವರು ಗುರಾಣಿಯ ಗೌಸಣಿಗೆಯನ್ನು ತೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:6
9 ತಿಳಿವುಗಳ ಹೋಲಿಕೆ  

ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?


ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.


ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.


ನಿಮ್ಮ ಫಲವತ್ತಾದ ತಗ್ಗುಪ್ರದೇಶಗಳು ರಥಗಳಿಂದ ತುಂಬಿರುವುವು. ಅಶ್ವದಳಗಳು ಪುರದ್ವಾರದ ಬಳಿ ಕಾವಲು ನಿಂತಿರುವುವು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು