Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:1 - ಕನ್ನಡ ಸತ್ಯವೇದವು C.L. Bible (BSI)

1 ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:1
32 ತಿಳಿವುಗಳ ಹೋಲಿಕೆ  

ಯಾವಾನನ ಮಕ್ಕಳು - ಎಲಿಷಾ, ಸ್ಪೇಯಿನ್ (ತಾರ್ಷಿಸ್), ಸೈಪ್ರಸ್ (ಕಿತ್ತೀಮ್) ಮತ್ತು ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.


ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;


ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.


“ಸೈಪ್ರಸ್ ದ್ವೀಪಗಳಿಗೆ ಹೋಗಿ ನೋಡಿ; ಕೇದಾರ್ ನಾಡಿಗೆ ಕಳಿಸಿ ವಿಚಾರಮಾಡಿ, ಇಂಥ ಕಾರ್ಯ ಎಲ್ಲಿಯಾದರು ನಡೆಯಿತೆ ಎಂದು ಚೆನ್ನಾಗಿ ಆಲೋಚಿಸಿರಿ.


“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.


ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಅವನಿಗೆ ವಿರುದ್ಧವಾಗಿ ರೋಮಿನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗುವನು. ಪವಿತ್ರ ಒಡಂಬಡಿಕೆಯ ವಿರುದ್ಧ ಮತ್ಸರಗೊಂಡು ಸಾಧ್ಯವಾದಷ್ಟೂ ಹಾನಿಮಾಡುವನು. ಸ್ವದೇಶಕ್ಕೆ ಹಿಂದಿರುಗಿ ಪವಿತ್ರ ಒಡಂಬಡಿಕೆಯನ್ನು ತೊರೆದವರಿಗೆ ಆದರ ತೋರುವನು.


ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:


ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಪಾಳುಬಿದ್ದಿದೆ ಅಸ್ತವ್ಯಸ್ತವಾದ ನಗರ, ಯಾರೂ ಪ್ರವೇಶಿಸದಂತೆ ಮುಚ್ಚಿದೆ ಪ್ರತಿಯೊಂದು ಗೃಹ.


ಹಬ್ಬಿದೆ ಅದರ ಪ್ರಲಾಪ ಮೋವಾಬಿನ ಎಲ್ಲೆಗಳ ಪರಿಯಂತ, ವ್ಯಾಪಿಸಿದೆ ಅದರ ಆಕ್ರಂದ ಎಗ್ಲಯಿಮಿನ್, ಬೆಯೆರ್ ಏಲೀಮಿನ ತನಕ.


ತಾರ್ಷಿಷ್ ನಾಡಿನ ದೊಡ್ಡ ದೊಡ್ಡ ಹಡಗುಗಳನು I ಚಂಡಮಾರುತದಿಂದ ಪುಡಿಪುಡಿ ಮಾಡಿದೆ ನೀನು II


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಅಲ್ಲಿಂದ ಅದು ತಿರುಗಿಕೊಂಡು ರಾಮಾ, ಟೈರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರತೀರದಲ್ಲಿ ಕೊನೆಗೊಳ್ಳುತ್ತದೆ.


‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.”


“ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.


ಕರಾವಳಿಯ ನಿವಾಸಿಗಳೇ, ಗೋಳಾಡಿರಿ, ಸಮುದ್ರವನ್ನು ದಾಟಿ ತಾರ್ಷೀಷಿಗೆ ಹೋಗಿರಿ.


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


ನಿನ್ನ ಹುಟ್ಟುಗಳು ರೂಪಿಸಲಾಗಿವೆ ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಮೇಲ್ಮಾಳಿಗೆ ಕಟ್ಟಲಾಗಿದೆ ಕಿತ್ತೀಮ್ ದ್ವೀಪದ ತಿಲಕ ಹಲಗೆಯಿಂದ, ಕೆತ್ತಲಾಗಿದೆ ದಂತದಿಂದ.


ತಮ್ಮ ತಮ್ಮ ಹಡಗುಗಳಿಂದಿಳಿದು, ನೆಲದ ಮೇಲೆ ನಿಂತು. ತಲೆಗೆ ದೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿಕೊಂಡು,


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು